ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 245 ಮ್ಯಾನೇಜ್ಮೆಂಟ್ ಟ್ರೇನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 23, 2022 ಕ್ಕೆ ಮುನ್ನ ಆಸಕ್ತರು ಅಪ್ಲಿಕೇಶನ್ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ.
ಹುದ್ದೆಯ ಮಾಹಿತಿ:
ಮೆಕ್ಯಾನಿಕಲ್ ಎಂಜಿನಿಯರಿಂಗ್- 65
ಮೆಟಲುರ್ಜಿಕಲ್ ಎಂಜಿನಿಯರಿಂಗ್-52
ಎಲೆಕ್ಟ್ರಿಕಲ್ ಎಂಜಿನಿಯರಿಂಗ್- 59
ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್-13
ಮೈನಿಂಗ್ ಎಂಜಿನಿಯರಿಂಗ್ -26
ಕೆಮಿಕಲ್ ಎಂಜಿನಿಯರಿಂಗ್-14
ಸಿವಿಲ್ ಎಂಜಿನಿಯರಿಂಗ್-16
ವಿದ್ಯಾರ್ಹತೆ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 23, 2022ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(ಎನ್ಸಿಎಲ್) ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು – 5 ವರ್ಷ
PWD (ಸಾಮಾನ್ಯ) ಅಭ್ಯರ್ಥಿಗಳು-10 ವರ್ಷ
PWD (ಒಬಿಸಿ/ ಎನ್ಸಿಎಲ್) ಅಭ್ಯರ್ಥಿಗಳು- 13 ವರ್ಷ
PWD (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು- 15 ವರ್ಷ
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ PWD/ESM/ ಇಲಾಖೆಯ ಅಭ್ಯರ್ಥಿಗಳು- 200 ರೂ.
ಜನರಲ್/ಒಬಿಸಿ/EWS ಅಭ್ಯರ್ಥಿಗಳು-700 ರೂ.
ಪಾವತಿಸುವ ಬಗೆ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
GATE 2022 ಸ್ಕೋರ್
ಲಿಖಿತ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 23/11/2022