ಮೈಸೂರು(Mysuru): ಮೈಸೂರು ನಗರ ಘಟಕ ವ್ಯಾಪ್ತಿಯ ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳಲ್ಲಿ ಒಡಾಡುವ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವುವುಜೆಲಾ (ತುತ್ತೂರಿ) ಊದಿ ಕಿರಿಕಿರಿ ಉಂಟು ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದನ್ನು ಮತ್ತು ಬಳಸುವುದನ್ನು ನಿಷೇಧಿಸಿ ಆದೇಶಿಸಲಾಗಿರುತ್ತದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಇಂದು ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.