ಧಾರವಾಡ : ಇಂದಿನಿಂದ (ಸೆ.4) ಮೂರು ದಿನ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಗುರುವಾರದಿಂದ (ಸೆ.4) ಶನಿವಾರದವರೆಗೆ (ಸೆ.6) ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಗುರುವಾರ (ಸೆ.4) 9ನೇ ದಿನದ ಗಣೇಶನ ಮೂರ್ತಿಗಳ ವಿಸರ್ಜನೆ, ಶುಕ್ರವಾರ (ಸೆ.5) ಈದ್ ಮಿಲಾದ್ ಹಬ್ಬ ಹಾಗೂ ಶನಿವಾರ (ಸೆ.6) 11ನೇ ದಿನದ ಗಣೇಶನ ಮೂರ್ತಿಗಳು ವಿಸರ್ಜನೆಯಾಗಲಿವೆ.
ಈ ಹಿನ್ನೆಲೆ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಪೂರ್ಣ ಮದ್ಯ ಮಾರಾಟ ಬಂದ್ ಆಗಲಿದೆ. ಒಟ್ಟು ಮೂರು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದ್ದು, ಮದ್ಯಪ್ರಿಯರಿಗೆ ಶಾಕ್ ಕೊಟ್ಟಂತಾಗಿದೆ.















