ಮನೆ ಅಪರಾಧ ಸನಾತನ ಧರ್ಮ ಹೇಳಿಕೆ: ಬೆಂಗಳೂರು ನ್ಯಾಯಾಲಯ ಮುಂದೆ ಹಾಜರಾದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಹೇಳಿಕೆ: ಬೆಂಗಳೂರು ನ್ಯಾಯಾಲಯ ಮುಂದೆ ಹಾಜರಾದ ಉದಯನಿಧಿ ಸ್ಟಾಲಿನ್

0

ಬೆಂಗಳೂರು: ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

Join Our Whatsapp Group

ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

2023ರ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ, ‘ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ್ದರು.