ಸಂಜಯ್ ದತ್ ಅವರು ಬಾಲಿವುಡ್ ಜೊತೆಗೆ ದಕ್ಷಿಣದಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರು ಹೊಸ ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ. ಇಂದು (ಜುಲೈ 29) ಸಂಜಯ್ ದತ್ ಅವರ ಜನ್ಮದಿನ. ಆ ಪ್ರಯುಕ್ತ ಅವರ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ರಾಮ್ ಪೋತಿನೇನಿ ಹಾಗೂ ಪುರಿ ಜಗನ್ನಾಥ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಇಸ್ಮಾರ್ಟ್ ಶಂಕರ್’ ಚಿತ್ರ ಹಿಟ್ ಆಗಿತ್ತು. ಈಗ ಈ ಜೋಡಿ ‘ಡಬಲ್ ಇಸ್ಮಾರ್ಟ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ಆರಂಭ ಆಗಿದೆ. ಈ ಚಿತ್ರಕ್ಕಾಗಿ ರಾಮ್ ಅವರು ಭಿನ್ನ ಅವತಾರ ತಾಳಿದ್ದಾರೆ. ‘ಪುರಿ ಕನೆಕ್ಟ್ಸ್’ ಲಾಂಛನದ ಅಡಿಯಲ್ಲಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಸಂಜಯ್ ದತ್ ಎಂಟ್ರಿ ಆಗಿದೆ.
ಬ್ಯಾಕ್ ಟು ಬ್ಯಾಕ್ ದಕ್ಷಿಣದ ಸಿನಿಮಾಗಳಲ್ಲಿ ನಟಿಸುತ್ತಿರುವ ಸಂಜಯ್ ದತ್ ‘ಡಬಲ್ ಇಸ್ಮಾರ್ಟ್’ ಚಿತ್ರದ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೋಸ್ಟರ್ ರಿಲೀಸ್ ಮಾಡಿ, ಬರ್ತ್ಡೇ ಶುಭ ಕೋರಲಾಗಿದೆ.
ಪೋಸ್ಟರ್ ನಲ್ಲಿ ಸಂಜಯ್ ದತ್ ಅವರ ಲುಕ್ ಗಮನ ಸೆಳೆಯುವಂತಿದೆ. ಸ್ಟೈಲಿಶ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಸಿಗಾರ್ ಇದೆ. ಬಿಗ್ ಬುಲ್ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಸಂಜಯ್ ದತ್ ನ ತೋರಿಸಲು ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
‘ಡಬಲ್ ಇಸ್ಮಾರ್ಟ್’ ಸಿನಿಮಾಗೆ ಹಾಲಿವುಡ್ ಛಾಯಾಗ್ರಾಹಕರು ಬರಲಿದ್ದಾರೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ತಯಾರಾಗುತ್ತಿದೆ. 2024ರ ಶಿವರಾತ್ರಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆ ಇದೆ. ಕೇವಲ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿಬರಲಿದೆ.