ಮನೆ ಸುದ್ದಿ ಜಾಲ ವೀಕೆಂಡ್ ಕರ್ಫ್ಯೂ ನಡುವೆ ಸಂಕ್ರಾಂತಿ ಸಂಭ್ರಮ

ವೀಕೆಂಡ್ ಕರ್ಫ್ಯೂ ನಡುವೆ ಸಂಕ್ರಾಂತಿ ಸಂಭ್ರಮ

0

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇ ದಿನೇ ಅಧಿಕಗೊಳ್ಳುತ್ತಿರುವ ಬೆನ್ನಲ್ಲೆ ವಾರಾಂತ್ಯ ಕರ್ಫ್ಯೂ ನಡುವೆಯೇ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. 

ಕೆಲವೆಡೆ ಶುಕ್ರವಾರವೇ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇನ್ನೂ ಕೆಲವರು ಇಂದು ಆಚರಿಸುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸತತ ಎರಡನೇ ವಾರವೂ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ತುರ್ತು ಸಂದರ್ಭ ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

Advertisement
Google search engine

ಕೊರೋನಾ ಸೋಂಕು ನಿಯಂತ್ರಣಕ್ಕೆ ತರುವ ಸಲುವಾಗಿ ರಾಜ್ಯ ಸರ್ಕಾರ ತಿಂಗಳಾಂತ್ಯದವರೆಗೂ ರಾತ್ರಿ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದೆ. ಈಗಾಗಲೇ ಕಳೆದ 9 ದಿನಗಳಿಂದ ರಾತ್ರಿ ಕರ್ಫ್ಯೂ ಮತ್ತು ಕಳೆದ ವಾರಾಂತ್ಯದಲ್ಲಿ ಕರ್ಫ್ಯೂ ಇತ್ತು.

ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ವರಿಷ್ಟಾಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ನಿಯಮ ಜಾರಿಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

ಕಳೆದ ವಾರ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಕಾನೂನು ಕ್ರಮ, ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಬಾರಿ ಮತ್ತಷ್ಟು ಬಿಗಿ ಕ್ರಮದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.  ಇನ್ನು ಈ ತಿಂಗಳ ಅಂತ್ಯದವರೆಗೂ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಮುಂದುವರೆಯಲಿವೆ. 

ಹಿಂದಿನ ಲೇಖನಆಸ್ತಿ ವಿಚಾರಕ್ಕೆ ಗಲಾಟೆ: ಮಹಿಳೆಯ ಹತ್ಯೆ, ನಾಲ್ವರು ಆರೋಪಿಗಳ ಬಂಧನ
ಮುಂದಿನ ಲೇಖನಅಗ್ನಿ ಅವಘಡ: ಹೊತ್ತಿ ಉರಿದ ಶಾಪಿಂಗ್ ಮಾಲ್