ಮನೆ ರಾಷ್ಟ್ರೀಯ ಸಂತೂರ್ ಮಾಂತ್ರಿಕ ಭಜನ್ ಸೊಪೋರಿ ನಿಧನ

ಸಂತೂರ್ ಮಾಂತ್ರಿಕ ಭಜನ್ ಸೊಪೋರಿ ನಿಧನ

0

ನವದೆಹಲಿ (New Delhi)- ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸಂತೂರ್ ಮಾಂತ್ರಿಕ ಭಜನ್ ಸೊಪೋರಿ (73) ನಿಧನರಾಗಿದ್ದಾರೆ.

ಗುರುಗ್ರಾಮದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ ವರ್ಷದ ಜೂನ್‌ನಲ್ಲಿ ಸೊಪೋರಿ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.

ಸೊಪೋರಿ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪುತ್ರರಾದ ಸೋರಭ್ ಮತ್ತು ಅಭಯ್, ಸಂತೂರ್ ವಾದನದಲ್ಲಿ ಹೆಸರುಗಳಿಸಿದ್ದಾರೆ.

ಶುಕ್ರವಾರ ನವದೆಹಲಿಯ ಲೋಧಿ ರಸ್ತೆಯ ರುದ್ರಭೂಮಿಯಲ್ಲಿ ಸೊಪೋರಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ಸೊಪೋರಿ ಅವರ ಸಂತೂರ್ ವಾದನಕ್ಕೆ 2004ರಲ್ಲಿ ಪದ್ಮಶ್ರೀ ಸಹಿತ ಹಲವು ಪ್ರಶಸ್ತಿ, ಗೌರವ ಸಂದಿವೆ.

ಹಿಂದಿನ ಲೇಖನಶ್ರೀರಂಗಪಟ್ಟಣ: ʻಮೂಲ ಮಂದಿರ ಚಲೋʼಗೆ ಅವಕಾಶ ನಿರಾಕರಿಸಿದ ಪೊಲೀಸರು
ಮುಂದಿನ ಲೇಖನಹಿಜಾಬ್‌ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರ ಅಮಾನತು