Saval TV on YouTube
ಬೆಂಗಳೂರು(Bengaluru): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳನ್ನು ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.
ಖುದ್ದು ತನಿಖಾಧಿಕಾರಿಯೇ ಸಾಕ್ಷ್ಯ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದ್ದು, ಸಂತೋಷ್ ಪಾಟೀಲ್ 2 ಮೊಬೈಲ್’ಗಳ ಡಾಟಾದ ಸಂಪೂರ್ಣ ಮಾಹಿತಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಬಂದ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ನೀಡುವಂತೆ ಆದೇಶಿಸಿದೆ.
ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಸಂತೋಷ್ ಪಾಟೀಲ್ ಸಹೋದರ, ಅಸಲಿ ಸಾಕ್ಷ್ಯಗಳನ್ನು ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. ಇನ್ನು ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿತ್ತು.