ಮನೆ ಅಪರಾಧ ಸ್ಯಾಂಟ್ರೊ ರವಿ ಆರೋಗ್ಯದಲ್ಲಿ ಏರು ಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಸ್ಯಾಂಟ್ರೊ ರವಿ ಆರೋಗ್ಯದಲ್ಲಿ ಏರು ಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

0

ಬೆಂಗಳೂರು(Bengaluru): ಅಪರಾಧ ತನಿಖಾ ವಿಭಾಗ (ಸಿಐಡಿ) ವಶದಲ್ಲಿರುವ ಸ್ಯಾಂಟ್ರೋ ರವಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುಮೇಹದಿಂದ ಬಳಲುತ್ತಿರುವ ಆರೋಪಿಯ ಆರೋಗ್ಯದಲ್ಲಿ ನಿನ್ನೆ ಸಂಜೆ ವ್ಯತ್ಯಯವಾಗಿದ್ದು, ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪತ್ನಿಯ ವಿರುದ್ಧ ಸುಳ್ಳು ಪ್ರಕರಣ, ಮಾನಸಿಕ ಹಾಗೂ ದೈಹಿಕ‌ ಕಿರುಕುಳ ಪ್ರಕರಣದಲ್ಲಿ ಬಂಧಿತನಾಗಿರುವ ಸ್ಯಾಂಟ್ರೋ ರವಿ ಸದ್ಯ ಸಿಐಡಿ ವಶದಲ್ಲಿದ್ದಾರೆ. ಜನವರಿ 30ಕ್ಕೆ ಕಸ್ಟಡಿ ಅವಧಿ ಅಂತ್ಯವಾಗಲಿದೆ.

ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್.ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ.