ಮನೆ ಸುದ್ದಿ ಜಾಲ ಹಿಂದೂ ಪದ ಕುರಿತು ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ: ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ

ಹಿಂದೂ ಪದ ಕುರಿತು ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ: ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ

0

ಬೆಳಗಾವಿ: ‘ಹಿಂದೂ’ ಪದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೀಡಿದ ಹೇಳಿಕೆ ಖಂಡಿಸಿ ನಗರದಲ್ಲಿ ಹಾಗೂ ರಾಜ್ಯ ವಿವಿದೆಡೆ ಬಿಜೆಪಿ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸತೀಶ ಜಾರಕಿಹೊಳಿ ಕೂಡಲೇ ತಮ್ಮ ಹೇಳಿಕೆ ಹಿಂಪಡೆಯಬೇಕು. ಹಿಂದೂಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾಂತೇಶ ಕವಟಗಿಮಠ, ಎಂ.ಬಿ.ಝಿರಲಿ ಇತರರಿದ್ದರು.

ಹೊಸಪೇಟೆ:

 ‘ಹಿಂದೂ’ ಪದದ ಬಗ್ಗೆ ಸತೀಶ ಜಾರಕಿಹೊಳಿ ಕೊಟ್ಟಿರುವ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೆಲಕಾಲ ರಸ್ತೆತಡೆ ನಡೆಸಿದ ಕಾರ್ಯಕರ್ತರು, ಸತೀಶ ಜಾರಕಿಹೊಳಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.

ಸತೀಶ ಜಾರಕಿಹೊಳಿ ಅವರು ಹಿಂದೂಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಹಿಂದೂ ಪದದ ಅವಹೇಳನ ಮಾಡಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಕಾಸೆಟ್ಟಿ ಉಮಾಪತಿ, ನಗರಸಭೆ ಸದಸ್ಯ ಜೀವರತ್ನಂ, ಜಿಲ್ಲಾ ಮಾಧ್ಯಮ ಸಂಚಾಲಕ ಸತ್ಯನಾರಾಯಣ, ಪಕ್ಷದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಸಾಲಿ ಸಿದ್ದಯ್ಯ ಸ್ವಾಮಿ, ಶಂಕರ್‌ ಮೇಟಿ ಇತರರಿದ್ದರು.

ಚಾಮರಾಜನಗರ: ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಜಾರಕಿಹೊಳಿ ಹೇಳಿಕೆ ಹಿಂಪಡೆದು ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು.

ಹಿಂದಿನ ಲೇಖನಮೈಸೂರು: ಹುಲಿ ದಾಳಿಗೆ ಹಸು ಬಲಿ- ಆತಂಕದಲ್ಲಿ ಜನತೆ
ಮುಂದಿನ ಲೇಖನಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯ ವಿಚಾರಣೆಗೆ ಕೋರ್ಟ್‌ ಒಪ್ಪಿಗೆ