ಮನೆ ಉದ್ಯೋಗ ಎಸ್ ಬಿಐ ಬ್ಯಾಂಕ್ ನೇಮಕಾತಿ; 641 ಹುದ್ದೆಗಳಿಗೆ ಅರ್ಜಿ ಹಾಕಿ

ಎಸ್ ಬಿಐ ಬ್ಯಾಂಕ್ ನೇಮಕಾತಿ; 641 ಹುದ್ದೆಗಳಿಗೆ ಅರ್ಜಿ ಹಾಕಿ

0

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 641 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಜೂನ್ 7, 2022 ಕೊನೆಯ ದಿನವಾಗಿದೆ. ಎ

ಸ್‌ಬಿಐ Channel Manager Facilitator, Support Officer ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಒಟ್ಟು 641 ಹುದ್ದೆಗಳಿವೆ. Channel Manager Facilitator 503, Channel Manager supervisor 130, ಸಪೋರ್ಟ್‌ ಅಫೀಸರ್ 8 ಹುದ್ದೆಗಳಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36,000 ದಿಂದ 41,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಇಂಡಿಯಾ ನೇಮಕಾತಿ ನಿಯಮಗಳ ಅನ್ವಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ಅನುಭವದ ವಿವರಗಳು; ಎಟಿಎಂ ಕಾರ್ಯಾಚರಣೆಯಲ್ಲಿ ಕಾರ್ಯ ನಿರ್ವಹಣೆ ಮಾಡಿ ನಿವೃತ್ತಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಮಾರ್ಟ್‌ ಫೋನ್ ಹೊಂದಿರಬೇಕು. ಮೊಬೈಲ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ನಿರ್ವಹಣೆ ಮಾಡುವ ಕೌಶಲ್ಯ ಹೊಂದಿರಬೇಕು.

ಎಸ್‌ಬಿಐ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 60 ಮತ್ತು ಗರಿಷ್ಠ 63 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ (18 ಮೇ 2022)ಕ್ಕೆ ಅನ್ವಯವಾಗುವಂತೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಶಾರ್ಟ್‌ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನಮೂದಿಸಬೇಕು. ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ sbi.co.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಹಿಂದಿನ ಲೇಖನವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನರೋಡ್‌ ರೇಜ್‌ ಪ್ರಕರಣ: ನವಜೋತ್‌ ಸಿಂಗ್‌ ಸಿಧು ಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್‌