ಮನೆ ಉದ್ಯೋಗ ಎಸ್’​ಬಿಐನಲ್ಲಿ 1673ಪಿಒ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಎಸ್’​ಬಿಐನಲ್ಲಿ 1673ಪಿಒ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

0

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಬೃಹತ್​ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 1673 ಪ್ರೋಬೇಷನರಿ ಆಫೀಸರ್ ಹುದ್ದೆಗಳಿಗೆ ಚಾಲನೆ ನೀಡಲಾಗಿದ್ದು, ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಂಕಿಂಗ್​ ವಲಯದಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಅಕ್ಟೋಬರ್​​ 12 ಆಗಿದೆ.

ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

 ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಸಲ್ಲಿಕೆ: ಆನ್​ಲೈನ್​

ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 750 ರೂ.

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಸೆಪ್ಟೆಂಬರ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 12 ಅಕ್ಟೋಬರ್​ 2022

ಅಧಿಕೃತ ವೆಬ್‌ಸೈಟ್: sbi.co.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ 

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

ಹಿಂದಿನ ಲೇಖನಈ ಪ್ರಾಣಿಗಳನ್ನು ಮನೆಯಲ್ಲಿ ಸಾಕಿದರೆ ಅದೃಷ್ಟ ಒಲಿಯುತ್ತೆ
ಮುಂದಿನ ಲೇಖನಪಿಯುಸಿ ಮತ್ತು ಎಸ್’ಎಸ್’ಎಲ್’ಸಿ ಬೋರ್ಡ್ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ