ಮನೆ ರಾಷ್ಟ್ರೀಯ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿ: ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿ: ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಜೂನ್ 29ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದರು.

Join Our Whatsapp Group

ದೆಹಲಿಗೆ ತೆರಳುವ ಮುನ್ನ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಲಿದ್ದೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪಿಸಲಿದ್ದೇನೆ. ಇದಕ್ಕಾಗಿ ಸಂಸದರ, ರಾಜ್ಯಸಭಾ ಸದಸ್ಯರ ಜತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಹಿಂದಿನ ಲೇಖನಬಿಜೆಪಿ ಭೀಷ್ಮ ಎಲ್​ ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮುಂದಿನ ಲೇಖನನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು: ಹೆಚ್.ಡಿ.ಕುಮಾರಸ್ವಾಮಿ