ಬೆಂಗಳೂರು: ಮೇ 29 ರಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದ್ದು, ಈ ಬಾರಿ ಹೊಸ ಶೈಕ್ಷಣಿಕ ವರ್ಷವನ್ನು ವಿಶೇಷ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ತಯಾರಾಗಿದೆ. ಸರ್ಕಾರ ‘ಎರಡು ವರುಷ – ಶಿಕ್ಷಣದಲ್ಲಿ ಹರುಷʼ ಎಂಬ ಶೀರ್ಷಿಕೆಯಿಂದ ಶೈಕ್ಷಣಿಕ ಪ್ರಾರಂಭೋತ್ಸವವನ್ನು ರಾಜ್ಯಾದ್ಯಂತ ಸಂಭ್ರಮಪೂರ್ಣವಾಗಿ ಆಯೋಜಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಮಹತ್ವದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 29ರಂದು ಚಾಲನೆ ನೀಡುವರು. ಶಾಲಾ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.














