ನವದೆಹಲಿ(New Delhi): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಎಸ್ಡಿಪಿಐ, ಪಿಎಫ್ಐ ಸಂಘಟೆನಗಳ ಕೈವಾಡವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಕಾರ್ಯಾಕಾರಿಣಿ ಸದಸ್ಯನ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಘಟನೆ ಬಳಿಕ ಪ್ರಾಥಮಿಕ ವರದಿಗಳು ಹಾಗೂ ಕೆಲವು ಮಾಧ್ಯಮಗಳು ಪ್ರವೀಣ್ ಹತ್ಯೆ ಕೃತ್ಯದಲ್ಲಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮತ್ತು ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳಿವೆ ಎಂದು ವರದಿ ಮಾಡಿದ್ದವು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೇರಳದಲ್ಲಿ ಹಾಗೂ ಕರ್ನಾಕಟದಲ್ಲಿ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ನವರೆ ಆ ಸಂಘಟನೆಗಳನ್ನು ಬೆಂಬಲಿಸುತ್ತಾರೆ ಎಂದು ಕಿಡಿ ಕಾರಿದರು.
ಬಿಜೆಪಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹತ್ಯೆಗೈದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.