ಬೆಂಗಳೂರು: ಹುಲಿ ಉಗುರಿನ ಡಾಲರ್ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ಹಳ್ಳಿಕಾರ್ ಖ್ಯಾತಿಯ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ಹುಲಿ ಉಗುರಿನ ಡಾಲರ್ ಧಾರಣೆ ಪ್ರಕರಣದಲ್ಲಿ ಅ.22ರಂದು ಬಿಗ್ ಬಾಸ್ ಮನೆಯಿಂದಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದರಿಂದ ಅನಿರೀಕ್ಷಿತವಾಗಿ ಮನೆಯಿಂದ ಎಕ್ಸಿಟ್ ಆಗಿದ್ದ ಅವರು ಮತ್ತೆ ಬಿಗ್ ಬಾಸ್ ಮನೆ ಸೇರಿಕೊಂಡಿದ್ದಾರೆ.
ಸಂತೋಷ್ ಪರ ವಕೀಲ ನಟರಾಜ್ ಹೇಳಿಕೆ ಪ್ರಕಾರ, ಕನಿಷ್ಟ ಏಳು ವರ್ಷಗಳ ಸಜಾ ಒಳಪಟ್ಟ ಪ್ರಕರಣದಲ್ಲಿ ಮೊದಲು ಸೂಚನೆ ನೀಡಿ, ನಂತರ ಬಂಧಿಸಬೇಕಿತ್ತು. ಏಕಾಏಕಿ ಬಂಧಿಸಿ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೃಷಿ ಕುಟುಂಬದ ಹಿನ್ನೆಲೆ ಹೊಂದಿರುವ ಸಂತೋಷ್ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹುಲಿ ಉಗುರಿನ ಡಾಲರ್ ಧರಿಸಿರುವ ಆರೋಪದಡಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನನ್ನ ಕಕ್ಷಿದಾರರನ್ನು ವೀರಪ್ಪನ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹುಲಿ ಉಗುರು ಪೆಂಡೆಂಟ್ ಹೊಂದಿರುವ ನಟ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳು ಸಂತೋಷ್ ಬಂಧನಕ್ಕೂ ಮುನ್ನ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.