ಮನೆ ಸ್ಥಳೀಯ ಸೆ. 22 ರಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆರಂಭ

ಸೆ. 22 ರಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆರಂಭ

0

ಮೈಸೂರು:- ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ 2023-24ನೇ ಸಾಲಿನ ಮೈಸೂರು ಜಿಲ್ಲೆಯ ನಂಜನಗೂಡು, ಹೆಚ್.ಡಿ.ಕೋಟೆ, ಮೈಸೂರು, ಸರಗೂರು, ಕೆ.ಆರ್.ನಗರ, ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.

Join Our Whatsapp Group

ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಂಜನಗೂಡು ತಾಲೂಕಿನಲ್ಲಿ ಸೆಪ್ಟೆಂಬರ್ 22 ರಂದು ನಂಜನಗೂಡು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೈಸೂರು ತಾಲೂಕಿನಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದೆ.

 ಸೆಪ್ಟೆಂಬರ್ 23 ರಂದು ಸರಗೂರು ತಾಲೂಕಿನಲ್ಲಿ ಬಾಲ್ ಫಿಲ್ಡ್ ಮೈದಾನ ಮತ್ತು ಲಯನ್ ಸ್ಕೂಲ್ ಆವರಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 25 ರಂದು ಹೆಚ್ ಡಿ ಕೋಟೆ ತಾಲೂಕಿನ  ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಸಾಲಿಗ್ರಾಮ ತಾಲೂಕಿನಲ್ಲಿ ಚುಂಚನಕಟ್ಟೆಯಲ್ಲಿನ ಜೆ.ಎಸ್.ಎಸ್ ವಿದ್ಯಾ ಸಂಸ್ಥೆ ಆವರಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ.

ಸೆ. 26 ರಂದು ಕೆ.ಆರ್ ನಗರ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ  ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‌ಬಾದ್, ಮೈಸೂರು ಇಲ್ಲಿನ ದೂರವಾಣಿ ಸಂಖ್ಯೆ: 0821-2564179 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಸಚಿವರ ಸಮ್ಮುಖದಲ್ಲೇ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ – ಗುಣಮಟ್ಟದ ಬಗ್ಗೆ ಗ್ರಾಮಸ್ಥರ ಸಂತಸ
ಮುಂದಿನ ಲೇಖನರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ