ಬೆಂಗಳೂರು: ನಾಳೆ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಏಪ್ರಿಲ್ 8ರಂದು ಪ್ರಕಟವಾಗಲಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.
ಇನ್ನು ವೀಕ್ಷಣೆ ಮಾಡುವುದು karresults.nic.in, kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಪಾಸಾಗಬೇಕಿದ್ದರೆ ಶೇ 35 ಅಂಕ ಗಳಿಸಲೇಬೇಕು ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.