ಮನೆ ಸುದ್ದಿ ಜಾಲ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಂಡಿದ್ದು, ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್​ ತಿಳಿಸಿದೆ.

ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಿಯು ಬೋರ್ಡ್, ಪೋಷಕರು- ವಿದ್ಯಾರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.‌ ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಂದು ಗಣಿತಶಾಸ್ತ್ರ ವಿಷಯದ ಮೂಲಕ ಪರೀಕ್ಷೆ ಆರಂಭಗೊಳ್ಳಲಿವೆ.

ಪಿಯು ಬೋರ್ಡ್​ ಹೊರಡಿಸಿದ ಆದೇಶ ಪ್ರತಿಪಿಯು ಬೋರ್ಡ್​ ಹೊರಡಿಸಿದ ಆದೇಶ ಪ್ರತಿನಂತರ 2021-22ನೇ ಸಾಲಿನಲ್ಲೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30 ರಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿದೆ. ಹೀಗಾಗಿ ಶೇ.70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. 2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಐಚ್ಚಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ

16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್20-4-2022 – ಇತಿಹಾಸ, ಭೌತಶಾಸ್ತ್ರ

21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ

23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ

25-4-2022- ಅರ್ಥ ಶಾಸ್ತ್ರ

26-4-2022- ಹಿಂದಿ

28-4-2022- ಕನ್ನಡ

30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ

4-5-2022- ಇಂಗ್ಲಿಷ್

6-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ

ಹಿಂದಿನ ಲೇಖನಹಿಜಾಬ್ ವಿವಾದ; ಶಾಲಾ ಕಾಲೇಜಿಗೆ ರಜೆ ಘೋಷಿಸಿ, ಆನ್ ಲೈನ್ ತರಗತಿ ನಡೆಸಿ: ಸಿದ್ದರಾಮಯ್ಯ
ಮುಂದಿನ ಲೇಖನಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿ