ಮನೆ ಶಿಕ್ಷಣ ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಮಯ? ರಿಸಲ್ಟ್ ನೋಡುವುದೇಗೆ? ಎಂಬ ಮಾಹಿತಿ ಇಲ್ಲಿದೆ

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಮಯ? ರಿಸಲ್ಟ್ ನೋಡುವುದೇಗೆ? ಎಂಬ ಮಾಹಿತಿ ಇಲ್ಲಿದೆ

0

ಬೆಂಗಳೂರು: ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ.

Join Our Whatsapp Group

ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್ ​​ಸೈಟ್​ ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ.

ಫಲಿತಾಂಶ ಪರಿಶೀಲಿಸುವುದು ಹೇಗೆ ಮತ್ತು ಎಲ್ಲಿ?

 karresults.nic.in ಅಥವಾ pue.kar.nic  ಅಧಿಕೃತ ವೆಬ್ ​ಸೈಟ್​ ಗೆ ಭೇಟಿ ನೀಡಿ.

ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.

ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.

ಬಳಿಕ ಫಲಿತಾಂಶವನ್ನು ಡೌನ್‌ ಲೋಡ್ ಮಾಡಿಕೊಳ್ಳಿ.

2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರು ಭಾಗಗಳಲ್ಲಿ ನಡೆಸಲಾಗಿದೆ.