ಮನೆ ಸುದ್ದಿ ಜಾಲ ದ್ವಿತೀಯ ಪಿಯುಪರೀಕ್ಷೆ: ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲವೆಂದ ಸಚಿವ ನಾಗೇಶ್

ದ್ವಿತೀಯ ಪಿಯುಪರೀಕ್ಷೆ: ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲವೆಂದ ಸಚಿವ ನಾಗೇಶ್

0

ಬೆಂಗಳೂರು: ಇದೇ ತಿಂಗಳ 22ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ ಸೇರಿ ಯಾವುದೇ ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಈ ಬಾರಿ ಒಟ್ಟು 68,42,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದಿನ ಅನುಭವಗಳ ಆಧಾರದಲ್ಲಿ ಸೋರಿಕೆ ತಡೆಗೆ ಕ್ರಮ ವಹಿಸಲಾಗಿದೆ.

ಅಕ್ರಮ ತಡೆಯಲು 2152 ಜಾಗೃತದಳ, 858 ತಾಲ್ಲೂಕು ಜಾಗೃತ ದಳ ಮತ್ತು 64 ಜಿಲ್ಲಾ ಜಾಗೃತ ದಳ ಕಾರ್ಯ ನಿರ್ವಹಿಸಲಿವೆ.ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ 144ನೇ ಸೆಕ್ಷನ್ ವಿಧಿಸಲಾಗುವುದು ಎಂದು ನಾಗೇಶ್ ಹೇಳಿದರು.