ಮನೆ ರಾಷ್ಟ್ರೀಯ ಸಂಸತ್ ನಲ್ಲಿ ಭದ್ರತಾ ಲೋಪ: ಲೋಕಸಭೆ ಸಚಿವಾಲಯ ಏಳು ಮಂದಿ ಅಮಾನತು

ಸಂಸತ್ ನಲ್ಲಿ ಭದ್ರತಾ ಲೋಪ: ಲೋಕಸಭೆ ಸಚಿವಾಲಯ ಏಳು ಮಂದಿ ಅಮಾನತು

0

ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಏಳು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ.

ಬುಧವಾರ ಕಲಾಪ ನಡೆಯುತ್ತಿದ್ದಾಗ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗಿದ್ದರು. ಅಷ್ಟಲ್ಲದೆ, ‘ಸ್ಮೋಕ್‌ ಕ್ಯಾನ್‌’ (ಹಳದಿ ಬಣ್ಣದ ಹೊಗೆ ಉಗುಳುವ ಕ್ಯಾನ್‌) ಹಾರಿಸಿ ದಾಂದಲೆ ಎಬ್ಬಿಸಿದ್ದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು. ಇದೇ ಸಮಯದಲ್ಲಿ ಸಂಸತ್‌ನ ಹೊರಗೂ ಇಬ್ಬರು ಪ್ರತಿಭಟನೆ ನಡೆಸಿದ್ದಾರೆ.

ಕೃತ್ಯದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಮೈಸೂರು ನಿವಾಸಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ.

ಪ್ರಕರಣ ಸಂಬಂಧ ದೆಹಲಿ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಭಯ ಸದನಗಳಲ್ಲಿ ಚರ್ಚೆಗೆ ಆಗ್ರಹ

ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೊಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿರುವ ಕಾಂಗ್ರೆಸ್‌ ಸಂಸದ ಮಾಣಿಕ್‌ ರಾಮ್‌ ಟಾಗೋರ್‌, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದಿನ ಲೇಖನತೆಲಂಗಾಣದ ಅಯ್ಯಪ್ಪ ಶಾಪಿಂಗ್ ಮಾಲ್’ನಲ್ಲಿ ಭಾರೀ ಅಗ್ನಿ ಅವಘಡ
ಮುಂದಿನ ಲೇಖನಸಾರಿಗೆ ಇಲಾಖೆಗೆ 5500 ಹೊಸ ಬಸ್, 9000 ಸಿಬ್ಬಂದಿ ಶೀಘ್ರದಲ್ಲೇ ನೇಮಕ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ