ಮನೆ ರಾಜಕೀಯ ನ್ಯಾಯಾಲಯದ ತೀರ್ಪನ್ನು ನೋಡಿಕೊಂಡು ಮುಂದಿನ ತೀರ್ಮಾನ: ಬಿ.ಸಿ.ನಾಗೇಶ್

ನ್ಯಾಯಾಲಯದ ತೀರ್ಪನ್ನು ನೋಡಿಕೊಂಡು ಮುಂದಿನ ತೀರ್ಮಾನ: ಬಿ.ಸಿ.ನಾಗೇಶ್

0

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ನ್ಯಾಯಾಲಯದ ತೀರ್ಪನ್ನು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಕೋರ್ಟ್ ಯಾವುದೇ ರೀತಿ ಆದೇಶವನ್ನು ನೀಡಿದರೂ ಅದನ್ನು ಗೌರವಿಸಬೇಕಾಗುತ್ತದೆ. ಕೋರ್ಟ್ ಆದೇಶವನ್ನು ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿನ ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಾಹಿತಿ ನೀಡಲಾಗಿದೆ. ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಹಠ ಹಿಡಿದು ಕುಳಿತಿರುವುದನ್ನು ಗಮನಿಸಿದರೆ, ಇದರ ಹಿಂದೆ ಕಾಣದ ಕೈಗಳಿವೆ ಎಂಬ ಅನುಮಾನ ಮೂಡುತ್ತದೆ ಎಂದು ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಹಿಂದಿನ ಲೇಖನಡಿಲೀಟ್ ಮಾಡಿದರೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪ್ರತಾಪ್ ಸಿಂಹ ಟ್ವೀಟ್
ಮುಂದಿನ ಲೇಖನಕೇರಳದ ಮಲಂಬುಳ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನ ರಕ್ಷಣೆ