ಮನೆ ಸ್ಥಳೀಯ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋದಿ ಜನ್ಮದಿನ ಆಚರಣೆ

ಸ್ವಯಂ ಪ್ರೇರಿತ ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋದಿ ಜನ್ಮದಿನ ಆಚರಣೆ

0

ಮೈಸೂರು: ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

Join Our Whatsapp Group

ನಂತರ ಸಾರ್ವಜನಿಕರಿಗೆ ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಚಹ ವಿತರಿಸಿ ಮಾತನಾಡಿ,   ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ. ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿಯವರ ದಾರಿಯಲ್ಲೇ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಗಿರೀಶ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ದಾಸ್ ಪ್ರಕಾಶ್, ಮಾಜಿನಗರಪಾಲಿಕ ಸದಸ್ಯರಾದ ರಂಗಸ್ವಾಮಿ, ಕೇಬಲ್ ವಿಜಿ, ಕುಮಾರ್ ಗೌಡ, ಸೂರಜ್, ಸದಾಶಿವ್, ದಾರಿಪುರ ಚಂದ್ರಶೇಖರ್, ಅರವಿಂದ್ ಹಾಗೂ ಇನ್ನಿತರರು ಹಾಜರಿದ್ದರು.