ಮನೆ ಮನರಂಜನೆ ಹಿರಿಯ ನಟ ಲೋಹಿತಾಶ್ವ ನಿಧನ

ಹಿರಿಯ ನಟ ಲೋಹಿತಾಶ್ವ ನಿಧನ

0

ಬೆಂಗಳೂರು(Bengaluru): ನಾಟಕಕಾರ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿತ್ತು. ಆ ತಕ್ಷಣವೇ ಅವರನ್ನು ಕುಮಾರಸ್ವಾಮಿ ಲೇಔಟ್​ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ಮೃತರು ಮಡದಿ ವತ್ಸಲಾ, ಪುತ್ರರಾದ ನಟ ಶರತ್​ ಲೋಹಿತಾಶ್ವ ಹಾಗೂ ವಿನಯ್​ ಮತ್ತು ಮಗಳು ವಿನಯಾ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗ ಇವರ ಅಗಲಿಕೆಗೆ ಕಂಬನಿ ಮಿಡಿದಿದೆ. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಅಭಿಮನ್ಯು, AK 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಹಿಂದಿನ ಲೇಖನಚಂದ್ರಗ್ರಹಣದ ಉಪವಾಸದ ಬಳಿಕ ಯಾವ ಆಹಾರ ಸೇವನೆ ಮಾಡಬೇಕು ?
ಮುಂದಿನ ಲೇಖನಕಾಂಗ್ರೆಸ್, ಭಾರತ್ ಜೋಡೋ ಯಾತ್ರೆ ಟ್ವಿಟರ್ ಖಾತೆ ಅಮಾನತು ಆದೇಶ ರದ್ದು ಪಡಿಸಿದ ಹೈಕೋರ್ಟ್