ಬೆಳಗಾವಿ: ಬೆಳಗಾವಿಯ ಕಾಂಗ್ರೆಸ್’ನ ಹಿರಿಯ ನಾಯಕ, ಮಾಜಿ ಸಚಿವ ಡಿಬಿ ಇನಾಮದಾರ್ ಅವರು ಇಂದು(ಮಂಗಳವಾರ) ವಿಧಿವಶರಾಗಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ಅವರು ಕಳೆದೊಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು. ಒಟ್ಟು 9 ಚುನಾವಣೆಗಳನ್ನ ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ್, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.
2023ರ ಚುನಾವಣೆಯಲ್ಲಿ ಕಿತ್ತೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಡಿ.ಬಿ ಇನಾಮದಾರ್, ಅನಾರೋಗ್ಯ ಕಾರಣಕ್ಕೆ ಡಿ.ಬಿ ಇನಾಮದಾರ್ ಸೊಸೆ ಲಕ್ಷ್ಮೀ ಇನಾಮದಾರ್’ಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಬಾಬಾಸಾಹೇಬ್ ಪಾಟೀಲ್’ಗೆ ಟಿಕೆಟ್ ನೀಡಿದೆ.














