ಮನೆ ರಾಜ್ಯ ಕಾಂಗ್ರೆಸ್’ನ ಹಿರಿಯ ನಾಯಕ ಕೆ.ಆರ್.ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನ

ಕಾಂಗ್ರೆಸ್’ನ ಹಿರಿಯ ನಾಯಕ ಕೆ.ಆರ್.ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನ

0

ಬೆಂಗಳೂರು: ಕಾಂಗ್ರೆಸ್’ನ ಹಿರಿಯ ನಾಯಕ ಕೆ.ಆರ್‌. ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ (69) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಂತಾಪ ಸೂಚಿಸಿದ ಸಿದ್ದರಾಮಯ್ಯ: ಪಕ್ಷದ ಹಿರಿಯ ನಾಯಕರು, ಆತ್ಮೀಯರಾದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನಕರ್ನಾಟಕ ಬಜೆಟ್-2023: ಚಿತ್ರರಂಗಕ್ಕೆ ನೀಡಿದ ಕೊಡುಗೆಗಳೇನು ?
ಮುಂದಿನ ಲೇಖನಆಸ್ಟ್ರೇಲಿಯಾ ವಿರುದ್ಧ 100 ವಿಕೆಟ್: ಆರ್.ಅಶ್ವಿನ್ ದಾಖಲೆ