ಮನೆ ರಾಜ್ಯ ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಪಿ. ತಂಕಚನ್ ನಿಧನ

ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಪಿ. ತಂಕಚನ್ ನಿಧನ

0

ತಿರುವನಂತಪುರಂ : ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಕೆರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ (86) ನಿಧನರಾಗಿದ್ದಾರೆ. ಇಂದು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.

ತಂಕಚನ್ ಕೇರಳ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷ ಮತ್ತು ಮೈತ್ರಿಕೂಟದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ತಂಕಚನ್ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.