ಮನೆ ಸುದ್ದಿ ಜಾಲ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ

0

ಧಾರವಾಡ: ಕನ್ನಡದ ಸಾರಸ್ವತ ಲೋಕದ ಮತ್ತೊಂದು ಕೊಂಡಿ ಕಳಚಿದ್ದು, ಚೆಂಬೆಳಕಿನ ಖ್ಯಾತಿಯ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಿಗ್ಗೆ 9. 15ಕ್ಕೆ ನಿಧನರಾಗಿದ್ದಾರೆ.
ನಾಡಿನ ಅಪೂರ್ವ ಸಾಹಿತಿಗಳಲ್ಲಿ ಒಬ್ಬರಾದ ಚೆಂಬೆಳಕಿನ ಕವಿ ಡಾ. ಚೆನ್ನವೀರ ಕಣವಿ ಹೊಸಗನ್ನಡ ಕಾವ್ಯದ 2ನೇ ತಲೆಮಾರಿನ ಕವಿ. ಪ್ರಕೃತಿಲೀಲೆ, ಪ್ರಣಯ, ದಾಂಪತ್ಯ, ವಾತ್ಸಲ್ಯದಂತಹ ರಮ್ಯ ಪರಂಪರೆಯ ನವ್ಯ ವಿಷಯಗಳು ಅವರ ಕೃತಿಗಳಲ್ಲಿವೆ. ಕಣವಿ ಜನಸಾಮಾನ್ಯರಿಗೆ ಸರಳವಾಗಿ ಕಾವ್ಯದ ರುಚಿ ಉಣಬಡಿಸಿದ ಶ್ರೇಷ್ಟಕವಿ ಮಾತ್ರವಲ್ಲ ಒಬ್ಬ ವಿಮರ್ಶಕರೂ ಹೌದು.

ಹಿಂದಿನ ಲೇಖನರಾಜ್ಯದಲ್ಲಿ ಪಿಯು, ಡಿಗ್ರಿ ಕಾಲೇಜು ಪುನರಾರಂಭ: ಹೆಚ್ಚಿದ ಭದ್ರತೆ
ಮುಂದಿನ ಲೇಖನಮುತ್ಸದ್ಧಿ ರಾಜಕಾರಣಿ, ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ನಿಧನ