ಮನೆ ಸುದ್ದಿ ಜಾಲ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ

0

ಕುಂದಾಪುರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಹಾಗೂ ಬಸ್ರೂರು ಶಾರದಾ ಕಾಲೇಜಿನಲ್ಲೂ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.

ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ತರಗತಿಯಲ್ಲಿ ಕೂರಿಸಲು ಕುಂದಾಪುರ ಸರಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿತ್ತು.

ಶಿಕ್ಷಣ ಸಂಸ್ಥೆಗಳಲ್ಲಿ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಶಾಲೆಗಳು ಮತ್ತು ಪದವಿ ಪೂರ್ವ-ಪದವಿ ಕಾಲೇಜುಗಳಲ್ಲಿ ಅದರ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಅದು ಅಥವಾ ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿಯು ಸೂಚಿಸಿದ ಸಮವಸ್ತ್ರಗಳನ್ನು ಮಾಡುವ ಆದೇಶವನ್ನು ಶನಿವಾರ ಹೊರಡಿಸಿತ್ತು.

ಕುಂದಾಪುರದ ಆರ್‌ಎನ್‌ ಶೆಟ್ಟಿ ಕಾಲೇಜಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲುಧರಿಸಿ ಹಳೆ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಮೆರವಣಿಗೆ ನಡೆಸಿದರು. ಬಳಿಕ ಪ್ರಾಂಶುಪಾಲರ ಸೂಚನೆಯಂತೆ ವಿದ್ಯಾರ್ಥಿಗಳು ಕೇಸರಿಶಾಲು ತೆಗೆದಿಟ್ಟು ಕಾಲೇಜು ಪ್ರವೇಶಿಸಿದರು.