ಮನೆ ಅಪರಾಧ ಪ್ರತ್ಯೇಕ ಕಳ್ಳತನ ಪ್ರಕರಣ:  ಓರ್ವ ಆರೋಪಿಯ ಬಂಧನ

ಪ್ರತ್ಯೇಕ ಕಳ್ಳತನ ಪ್ರಕರಣ:  ಓರ್ವ ಆರೋಪಿಯ ಬಂಧನ

0

ಮಡಿಕೇರಿ: ಶನಿವಾರ ಸಂತೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಳುಗಳಲೆ ಕಾಲೋನಿಯಲ್ಲಿ ಮೇ 24 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Join Our Whatsapp Group

ಸುಳುಗಳಲೆ ನಿವಾಸಿ ಜೀವನ್‌ (25) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 43 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಥಳೀಯ ನಿವಾಸಿ ಬಿ.ಕೆ.ಸುಂದರ್‌ ಎಂಬವರು ಮನೆಗೆ ಬೀಗ ಹಾಕಿ ಕೆಲಸಕ್ಕೆಂದು ತೆರಳಿದ್ದಾಗ ಕಳ್ಳತನ ನಡೆದಿತ್ತು. ಈ ಕುರಿತು ಶನಿವಾರಸಂತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿ ಜೀವನ್‌ ನನ್ನು ಬಂಧಿಸಿದರು.

ಈತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಸಿದಾಗ ಫೆ.11 ರಂದು ಶನಿವಾರಸಂತೆಯ ತ್ಯಾಗರಾಜ ಕಾಲೋನಿಯಲ್ಲಿನ ಶ್ರೀ ವಿಜಯ ವಿನಾಯಕ ದೇವಾಸ್ಥಾನದ ಕಚೇರಿಯ ಬೀಗವನ್ನು ಒಡೆದು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳವು ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್‌.ವಿ.ಗಂಗಾಧರಪ್ಪ, ಶನಿವಾರಸಂತೆ ಪಿಐ ಪ್ರೀತಂ.ಡಿ, ಪಿಎಸ್‌ಐಗಳಾದ ರವಿಶಂಕರ್‌.ಕೆ.ಆರ್‌, ಗೋವಿಂದರಾಜು ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಎರಡು ಪ್ರಕರಣಗಳ ಆರೋಪಿಯನ್ನು ಪತ್ತೆ ಹಚ್ಚಿ ಸಂಪೂರ್ಣ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಅವರು ಶ್ಲಾಘಿಸಿದ್ದಾರೆ.