ಮನೆ ಅಪರಾಧ ಒಡಿಶಾದಲ್ಲಿ ಸರಣಿ ಅಪಘಾತ: ಮೂವರು ಸಾವು

ಒಡಿಶಾದಲ್ಲಿ ಸರಣಿ ಅಪಘಾತ: ಮೂವರು ಸಾವು

0

ಭುವನೇಶ್ವರ್: ಒಡಿಶಾದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ.

ಒಡಿಶಾದ ಕೊರಾಪುಟ್ ಜಿಲ್ಲೆಯ ಬೊರಿಗುಮ್ಮ ಪ್ರದೇಶದಲ್ಲಿ 2 ಬೈಕ್​​​​​​, ಒಂದು ಆಟೋರಿಕ್ಷಾ, ಒಂದು ಟ್ರ್ಯಾಕ್ಟರ್ ಮತ್ತು ಎಸ್‌ ಯುವಿ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ಸಿಎಂ ಪಟ್ನಾಯಕ್ ಅವರು ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

ಗಾಯಗೊಂಡ 13 ಜನರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕೋರಾಪುಟ್‌ ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಇತರ ಗಾಯಾಳುಗಳನ್ನು ಬೋರಿಗುಮ್ಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವಿವರಗಳನ್ನು ನೀಡಿದ ಪೊಲೀಸರು, ಎರಡು ಬೈಕ್‌ಗಳು, ಒಂದು ಆಟೋರಿಕ್ಷಾ, ಒಂದು ಟ್ರ್ಯಾಕ್ಟರ್ ಮತ್ತು ಒಂದು ಎಸ್‌ಯುವಿ ನಡುವೆ ಸರಣಿ ಅಪಘಾತ ಸಂಭವಿಸಿ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.