ಗಾಂಧಿನಗರ: ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು ಎಂದು ಹೇಳಿಕೆ ನೀಡಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಶಿಕ್ಷೆ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
ಮೋದಿ ಉಪನಾಮ ಪ್ರಕರಣದಲ್ಲಿನ ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
ಮೋದಿ ಉಪನಾಮ ಪ್ರಕರಣದಲ್ಲಿ ಮಾರ್ಚ್ 23ರಂದು ಸೂರತ್ ಜಿಲ್ಲಾ ನ್ಯಾಯಾಧೀಶರು ರಾಹುಲ್ ಗಾಂಧಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿದ್ದರು. ಇದೀಗ ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿಯ ಮೇಲ್ಮನವಿಯನ್ನು ವಜಾಗೊಳಿಸಿದ್ದರಿಂದ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಗಿದೆ.
Saval TV on YouTube