ಮನೆ ಅಂತಾರಾಷ್ಟ್ರೀಯ ಅಫ್ಗಾನಿಸ್ತಾನದಲ್ಲಿ ತೀವ್ರ ಭೂಕಂಪ

ಅಫ್ಗಾನಿಸ್ತಾನದಲ್ಲಿ ತೀವ್ರ ಭೂಕಂಪ

0

ಅಫ್ಗಾನಿಸ್ತಾನದ ಆಗ್ನೇಯ ಪ್ರಾಂತ್ಯದಲ್ಲಿ ಬುಧವಾರ ಬೆಳಗಿನ ಜಾವ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಿಎಫ್‌ಝೆಡ್ ಜರ್ಮನ್ ರಿಸರ್ಚ್ ಸೆಂಟರ್ ವರದಿ ಮಾಡಿದೆ.

ವರದಿ ಪ್ರಕಾರ, ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿ ಭೂಕಂಪ ಉಂಟಾಗಿದ್ದು, ಈ ಪ್ರದೇಶ ಪಾಕಿಸ್ತಾನದ ಗಡಿಗೆ ಸಮೀಪದಲ್ಲಿದೆ.

ಭೂಕಂಪದಲ್ಲಿ ಕನಿಷ್ಠ 155 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.ರಕ್ಷಣಾ ಸಿಬ್ಬಂದಿ ಹೆಲಿಕಾಪ್ಟರ್ ಮೂಲಕ ಆಗಮಿಸುತ್ತಿದ್ದಾರೆ ಎಂದು ಬಖ್ತರ್ ಸುದ್ದಿ ಸಂಸ್ಥೆ ಪ್ರತ್ಯೇಕವಾಗಿ ವರದಿ ಮಾಡಿದೆ.