ಮನೆ ರಾಜ್ಯ ತೀವ್ರ ಜ್ವರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

0

ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆಚ್​.ಡಿ  ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್ ​ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ.

ಹಿಂದಿನ ಲೇಖನಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಶವ ಪತ್ತೆ
ಮುಂದಿನ ಲೇಖನಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಓರ್ವ ಸಾವು