ಚಾಮರಾಜನಗರ: ಗ್ರಾ.ಪಂ ಅಧ್ಯಕ್ಷೆಯ ಮಗನ ಮೇಲೆ ಅತ್ಯಾಚಾರ ಆರೋಪ ಮಾಡಿದ್ದು ಎಫ್ಐಆರ್ ದಾಖಲಾಗಿದೆ, ಪಂಚಾಯಿತಿಯಿಂದ ಮನೆ ಕೊಡಿಸುವುದಾಗಿ ಹೇಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪುತ್ರ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿರುವ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾ.ಪಂ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪುತ್ರ ವೈದೇಶ್, ಬಸಮ್ಮಣ್ಣಿ ಹಾಗೂ ಶಿವಮ್ಮಣ್ಣಿ ಎಂಬವರ ವಿರುದ್ಧ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
25 ವರ್ಷದ ವಿವಾಹಿತೆ ಮನೆಗಾಗಿ ಅರ್ಜಿ ಸಲ್ಲಿಸಿದ್ದರು. ಮನೆ ಕಟ್ಟಿಕೊಡುವ ಆಸೆ ತೋರಿಸಿದ್ದ ವೈದೇಶ್ ತನ್ನ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಫೋಟೋ ಸೆರೆ ಹಿಡಿದಿದ್ದಾನೆ. ಆರೋಪಿಗಳು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.