ಚಿತ್ರದುರ್ಗ(Chitradurga): ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಶರಣರ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಸಂತ್ರಸ್ತ ವಿದ್ಯಾರ್ಥಿನಿಯರ ಪರ ವಕೀಲರಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಕಾಲಾವಕಾಶ ನೀಡಿತ್ತು.
ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿಯಾಗಿರುವ ಹಾಸ್ಟೆಲ್ ವಾರ್ಡನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.14ಕ್ಕೆ ಮುಂದೂಡಲಾಗಿದೆ.
ಪ್ರಕರಣದ ಮೂರನೇ ಆರೋಪಿ 17 ವರ್ಷದ ಬಾಲಕ, ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.