ಮನೆ ರಾಷ್ಟ್ರೀಯ ರಾಜಕಾರಣಿಯಿಂದ ಲೈಂಗಿಕ ದೌರ್ಜನ್ಯ: ಲೈವ್‌ ನಲ್ಲೇ ಕಣ್ಣಿರಿಟ್ಟು ಮಾಹಿತಿ ನೀಡಿದ ಖ್ಯಾತ ನಟಿ

ರಾಜಕಾರಣಿಯಿಂದ ಲೈಂಗಿಕ ದೌರ್ಜನ್ಯ: ಲೈವ್‌ ನಲ್ಲೇ ಕಣ್ಣಿರಿಟ್ಟು ಮಾಹಿತಿ ನೀಡಿದ ಖ್ಯಾತ ನಟಿ

0

ಹೈದರಾಬಾದ್:‌  ಇದೀಗ ಆಂಧ್ರಪ್ರದೇಶದ ರಾಜಕಾರಣಿಯೊಬ್ಬರ ಮೇಲೆ ಮುಂಬೈ ನಟಿಯೊಬ್ಬರು ಮಾಡಿರುವ ಲೈಂಗಿಕ ಹಾಗೂ ಮಾನಸಿಕ ಹಿಂಸೆಯ ಆರೋಪ ರಾಜಕೀಯ ಹಾಗೂ ಟಾಲಿವುಡ್ ಸಿನಿಮಾರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

Join Our Whatsapp Group

ಗುಜರಾತ್‌ ಮೂಲದ ಕಾದಂಬರಿ ಜೇತ್ವಾನಿ ಬಣ್ಣದ ಲೋಕ್ಕೆ ಕಾಲಿಡುವ ಮುನ್ನ ಮುಂಬೈನಲ್ಲಿ ಮಾಡೆಲ್‌ ಆಗಿ ಗುರುತಿಸಿಕೊಂಡಿದ್ದರು. 2012ರಲ್ಲಿ ಬಂದ ʼಸಡ್ಡಾ ಅಡ್ಡಾʼ ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ 2015ರಲ್ಲಿ ಬಂದ ‘ಯೂಜಾ’ ಎನ್ನುವ ತೆಲುಗು ಚಿತ್ರಕ್ಕೆ ನಾಯಕಿಯಾಹಿ ಆಯ್ಕೆ ಆಗಿದ್ದರು.

ಹೀಗೆ ಬಣ್ಣದ ಲೋಕದಲ್ಲಿ ತನ್ನ ಮೋಹಕ ಅಂದದಿಂದ ಗಮನ ಸೆಳೆದಿದ್ದ ಕಾದಂಬರಿ ಜೇತ್ವಾನಿ ತೆಲುಗಿನ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಇತ್ತೀಚೆಗೆ ಲೈವ್‌ನಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟು, ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಪಕ್ಷದ ನಾಯಕನೊಬ್ಬನ ಮೇಲೆ ಮೇಲೆ ಮಾಡಿರುವ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಆಂಧ್ರದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಯಾರ ಮೇಲೆ ಆರೋಪ?: ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳು ಹಣ ಹಾಗೂ ಅಧಿಕಾರದ ದುರ್ಬಳಕೆ ಮಾಡಿಕೊಂಡ ನನ್ನ ಹಾಗೂ ನನ್ನ ಕುಟುಂಬದ ಮೇಲೆ ದೈಹಿಕ ಹಾಗೂ ಮಾನಸಿಕ ಹಿಂಸೆಯನ್ನು ನೀಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ವಿಜಯವಾಡ ಜಿಪಂ ಮಾಜಿ ಅಧ್ಯಕ್ಷ ಕುಕ್ಕಲ ನಾಗೇಶ್ವರ ರಾವ್ ಅವರ ಮಗ ವೈಎಸ್‌ಆರ್‌ಸಿಪಿ ನಾಯಕ ಕುಕ್ಕಲ ವಿದ್ಯಾಸಾಗರ್‌ ಎಂಬಾತ ಪ್ರತಿದಿನ ನನಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದ. ವಾಟ್ಸಾಪ್ ನಲ್ಲಿ ಕರೆ ಮಾಡಿ ಬೆತ್ತಲೆಯಾಗಿ ನಿಂತು ಸೆಲ್ಫಿ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದ. ಅಂದಿನ ಆಂಧ್ರ ಸರ್ಕಾರದ ಪ್ರಬಲ ನಾಯಕರು, ಉನ್ನತ ಪೊಲೀಸ್ ಅಧಿಕಾರಿಗಳ ಗ್ಯಾಂಗ್ ಹಣ ಹಾಗೂ ಅಧಿಕಾರವನ್ನು ಬಳಸಿಕೊಂಡು ನನಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಆಂಧ್ರ ಸರ್ಕಾರದ ಆದೇಶದ ಮೇರೆಗೆ ಅದೊಂದು ದಿನ ಮುಂಬೈನಲ್ಲಿನ ನನ್ನ ಮನೆಗೆ ಆಂಧ್ರ ಪೊಲೀಸರು ದಾಳಿ ಮಾಡಿದ್ದರು. ನನ್ನನ್ನು ಅಪಹರಿಸಿ, ನನ್ನ ತಂದೆ – ತಾಯಿಯನ್ನು ಜೈಲಿಗಟ್ಟಿದ್ದರು. ಜೈಲಿನಲ್ಲಿ ನೀಡಿದ ಚಿತ್ರಹಿಂಸೆಯಿಂದಾಗಿ ನನ್ನ ತಂದೆಗೆ ಕಿವಿ ಕೇಳಿಸದಂತೆ ಆಯಿತು. ನನ್ನ ತಾಯಿಗೆ ಹೃದಯದ ಸಮಸ್ಯೆಯಾಯಿತು ಎಂದು ಅವರು ಆರೋಪಿಸಿದ್ದಾರೆ.

ಆರು ತಿಂಗಳಿಂದ ಯಾರೊಂದಿಗೂ ಮಾತನಾಡಲಿಲ್ಲ. ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂಬೈನಲ್ಲಿ ನನ್ನನ್ನು ಅಪಹರಿಸಿ ವಿಜಯವಾಡಕ್ಕೆ ಕರೆತರಲಾಯಿತು. ನನ್ನ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನನ್ನ ಪೋಷಕರ ಫೋನ್ ವಶಪಡಿಸಿಕೊಳ್ಳಲಾಗಿದೆ. ಅವರು ನನ್ನ ಸಂಬಂಧಿಕರಿಗೆ ಬೆದರಿಕೆ ಹಾಕಿದರು ಎಂದು ಅವರು ಹೇಳಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ನನ್ನ ಮೇಲೆ ದೂರು ದಾಖಲಿಸಿ ಸುಮಾರು 45 ದಿನಗಳ ಕಾಲ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ. ಈ ಕಾಲದಲ್ಲಿಯೂ ಮಹಿಳೆಗೆ ಈ ರೀತಿಯಾದರೆ ಮಹಿಳೆಯರಿಗೆ ಸ್ವಾತಂತ್ರ್ಯ ಎಲ್ಲಿದೆ ಎಂದು ಅವರು ಕಣ್ಣೀರಿಟ್ಟಿದ್ದಾರೆ.

ವಿದ್ಯಾ ಸಾಗರ್‌ ಪರಿಚಯವಾದದ್ದು ಹೇಗೆ?: ನನ್ನ ಮೇಲೆ ಸುಳ್ಳ ಆರೋಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ನನ್ನನ್ನು ಜೈಲಿಗಟ್ಟಿದ ಈತ ನನ್ನ ಸ್ನೇಹಿತವೆಂದು ಹೇಳಿಕೊಂಡು 2009ರಿಂದ ಪರಿಚಯವಾಗಿದ್ದ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಾ, ಒಳ್ಳೆಯದನ್ನು ಬಯಸುತ್ತಾ ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ. ಈತ ನನ್ನ ಜೀವನದಲ್ಲಿ ಹೇಗೆಲ್ಲಾ ಮಾಡುತ್ತಾನೆ ಅಂಥ ನಾನು ಕಲ್ಪನೆಯೂ ಮಾಡಿಕೊಂಡಿರಲಿಲ್ಲ. ಅವನ ಒಳ್ಳೆಯತನದ ಹಿಂದೆ ಒಂದು ಕೆಟ್ಟ ಉದ್ದೇಶವಿತ್ತು ಎಂದು ನಟಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಜೈಲಿನಿಂದ ಹೊರಬಂದಿದ್ದೇನೆ. ಅವರು ನಮ್ಮ ಜೀವನಕ್ಕೆ ದೇವರಂತೆ ಬಂದರು ಎಂದು ಅವರು ಚಂದ್ರಬಾಬು ನಾಯ್ಡು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸದ್ಯ ನಟಿಯ ಈ ಆರೋಪ ಆಂಧ್ರ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದು, ಆರೋಪಿ ವಿದ್ಯಾ ಸಾಗರ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.