ಮನೆ ಅಪರಾಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ

ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ

0

ಚಿತ್ರದುರ್ಗ(Chitradurga): ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ  ಆರೋಪಿ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಶನಿವಾರ ಬಂಧಿಸಿದ ತನಿಖಾ ತಂಡ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿತು.

ಬಳಿಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿತು. ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆ.28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧನ ಭೀತಿಯಿಂದ ಆರೋಪಿ ತಲೆಮರೆಸಿಕೊಂಡು ಎರಡು ತಿಂಗಳು ಕಳೆದಿತ್ತು.