ಬೆಂಗಳೂರು: ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು. ಜಾಮೀನು ನಿರಾಕರಣೆ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳ ತಂಡ, ದೇವೇಗೌಡ ಅವರ ಮನಗೆ ಹೋಗಿತ್ತು.
ಮನೆ ಹೊರಗೆ ಹಾಗೂ ಒಳಗೆ ಹಲವು ನಿಮಿಷ ಶೋಧ ನಡೆಸಿತ್ತು. ಅಂತಿಮವಾಗಿ ಎಚ್.ಡಿ.ರೇವಣ್ಣ ಮನೆಯಲ್ಲಿರುವುದು ಖಾತ್ರಿಯಾಯಿತು. ನಂತರ, ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವರನ್ನು ಸಿಐಡಿ ಕಚೇರಿಗೆ ಕರೆತರುತ್ತಿದ್ದಾರೆ.















