ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ನಾಳೆ (ಮೇ 17) ಮಧ್ಯಾಹ್ನದವರೆಗೆ ಮಾತ್ರ ಮಧ್ಯಂತರ ಜಾಮೀನು ಜಾಮೀನು ನೀಡಿ ಗುರುವಾರ ಆದೇಶ ಹೊರಡಿಸಿದೆ.
ರೇವಣ್ಣ ಅವರು ತಮ್ಮ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಆಲಿಸಿದ ಕೋರ್ಟ್ ಒಂದೇ ದಿನದ ಮಧ್ಯಂತರ ಜಾಮೀನು ಮಂಜೂರು ಮಾಡಿ ತಾತ್ಕಾಲಿಕ ರಿಲೀಫ್ ನೀಡಿದೆ.
ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ ನೀಡುವಂತೆ ಷರತ್ತು ವಿಧಿಸಿ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ, ಮೇ 17ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದೆ.
ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ನೀಡುವ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿತ್ತು.














