ಮನೆ ರಾಜ್ಯ ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

0

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್‌ ಜಿ. ಅವರು ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Join Our Whatsapp Group

ವಿಚಾರಣೆಗೆ  ಹಾಜರಾಗುವಂತೆ ಸೂಚಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಉತ್ತರ ನೀಡಿರುವ ವಕೀಲ ಅರುಣ್, ‘ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಅವರು ಸದ್ಯ ಪ್ರವಾಸದಲ್ಲಿದ್ದಾರೆ. 7 ದಿನ ಕಾಲಾವಕಾಶ ನೀಡಿ. ನಂತರ, ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರಣೆಗೆ ಹಾಜರಾಗುತ್ತಾರೆ’ ಎಂದಿದ್ದಾರೆ.