ಮನೆ ಅಪರಾಧ ಲೈಂಗಿಕ ದೌರ್ಜನ್ಯ-ಕಿಡ್ನ್ಯಾಪ್‌ ಪ್ರಕರಣ: ಕಾನೂನು ಹೋರಾಟಕ್ಕಿಳಿದ ಶಾಸಕ ಎಚ್ ​ಡಿ ರೇವಣ್ಣ

ಲೈಂಗಿಕ ದೌರ್ಜನ್ಯ-ಕಿಡ್ನ್ಯಾಪ್‌ ಪ್ರಕರಣ: ಕಾನೂನು ಹೋರಾಟಕ್ಕಿಳಿದ ಶಾಸಕ ಎಚ್ ​ಡಿ ರೇವಣ್ಣ

0

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್​ ಡಿ ರೇವಣ್ಣ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಸಂತ್ರಸ್ತೆ ಅಪಹರಣ ಪ್ರಕರಣವನ್ನು ರದ್ದು ಕೋರಿ ರೇವಣ್ಣ ಪರ ವಕೀಲರು ಇಂದು (ಮೇ 28) ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

Join Our Whatsapp Group

ಹಾಸನದ ಹೊಳೆನರಸೀಪುರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ಹಾಗೂ ಮೈಸೂರಿನ ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಾಗಿವೆ. ಇದೀಗ ತಮ್ಮ ವಿರುದ್ಧ ದಾಖಲಾದ ಈ ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿತ್ತು. ಆರು ದಿನಗಳ ನಿರಂತರ ಕಾನೂನು ಹೋರಾಟ ಮಾಡಿ ಮೇ 13ರಂದು ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬಂದಿದ್ದರು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ಇದೀಗ ಎರಡು ಎಫ್‌ಐಆರ್‌ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಹೊಳೆನರಸೀಪುರದಲ್ಲಿ ದಾಖಲಾಗಿರುವ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಅವರ ಪುತ್ರ ಪ್ರಜ್ವಲ್​ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಇನ್ನು ಕೆ.ಆರ್‌.ನಗರದಲ್ಲಿ ದಾಖಲಾಗಿರುವ ,ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಸಹ ಆರೋಪಿಯಾಗಿದ್ದಾರೆ.

ಹಿಂದಿನ ಲೇಖನಬೆಳ್ಳೂರು ಪಟ್ಟಣದಲ್ಲಿ ಗುಂಪು ಘರ್ಷಣೆ: ಮೂರು ಪ್ರತ್ಯೇಕ ದೂರು ದಾಖಲು
ಮುಂದಿನ ಲೇಖನಸರಣಿ ಅಪಘಾತ: ಕಾರು ಸೇರಿ ಸಾರಿಗೆ ಎರಡು ಬಸ್‌ ಗಳಿಗೆ ಡಿಕ್ಕಿ