ತುಮಕೂರು: ಕಳೆದ 2021 ಅಕ್ಟೋಬರ್ 16 ರಂದು ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಘಟನೆ ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.
ಆರೋಪಿ ರವಿ ಎಂಬಾತ ಈ ಕೃತ್ಯ ಎಸಗಿದ್ದ. ಈ ಘಟನೆ ಸಂಬಂಧ ಅಂದಿನ ತನಿಖಾಧಿಕಾರಿ ಹನುಮಂತಪ್ಪ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದೀಗ ತುಮಕೂರಿನ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾರಾವ್ ಆರೋಪಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ್ದಾರೆ.
ಜೊತೆಗೆ ಕಾನೂನು ಸೇವಾ ಪ್ರಾಧಿಕಾರಕ್ಕೆ, ಸಂತ್ರಸ್ತ ಬಾಲಕಿಗೆ 4 ಲಕ್ಷ ಹಣವನ್ನ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
Saval TV on YouTube