ಮನೆ ಅಪರಾಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿ ಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿ ಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

0

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.