ಮನೆ ಅಪರಾಧ ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ

ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ

0

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಸಚಿನ್‌ ಮತ್ತು ಶೇಖರ್‌ ಬಂಧಿತರು.

ಆರೋಪಿಗಳು ಮನೆ ಸಮೀಪದ ಅಪ್ರಾಪೆ¤ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಸಂಬಂಧ ಏ.24ರಂದು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕೇಸ್‌ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂತ್ರಸ್ತೆ ಕುಟುಂಬದ ಜತೆ ವಾಸವಾಗಿದ್ದು, ಅಲ್ಲಿಯೇ ಆರೋಪಿಗಳು ಇದ್ದರು. ಸಂತ್ರಸ್ತೆ ಪೋಷಕರು ಕಾರ್ಯನಿಮಿತ್ತ ಹೊರಗಡೆ ಹೋಗಿದ್ದಾಗ, ಆರೋಪಿಗಳು ಸಂತ್ರಸ್ತೆಗೆ ಚಾಕೋಲೆಟ್‌ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಆಕೆಯನ್ನು ತಮ್ಮ ಮನೆಗೆ ಕರೆದೊಯ್ದಿದ್ದಾರೆ. ಮನೆಯಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದಾರೆ. ಅದನ್ನು ಗಮನಿಸಿದ ಸ್ಥಳೀಯರು ಸಂತ್ರಸ್ತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಪೋಷಕರು ಸ್ಥಳೀಯರ ಜತೆ ಆರೋಪಿಗಳ ಮನೆಗೆ ನುಗ್ಗಿ ಬಾಲಕಿ ರಕ್ಷಿಸಿ, ಆರೋಪಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸ್‌ ಠಾಣೆಗೆ ಕರೆ ತಂದಿದ್ದರು. ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಕೇಸ್‌ ದಾಖಲಿಸಿ ಬಂಧಿಸಲಾಗಿದೆ.

ಹಿಂದಿನ ಲೇಖನಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾ ಮಠದ ಶಿವಮೂರ್ತಿ ಶರಣರು
ಮುಂದಿನ ಲೇಖನಇವಿಎಂ ಮತಗಳೊಂದಿಗೆ ವಿವಿಪ್ಯಾಟ್ ತಾಳೆ: ಮತ್ತೊಂದು ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್