ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಪ್ರಕರಣದ ಮತ್ತೋರ್ವ ಆರೋಪಿ ವಿನೋದ್ ತೋಮರ್ ಗೆ ಇಂದು ಮದ್ಯಂತರ ಜಾಮೀನು ಮಂಜೂರು ಮಾಡಿದೆ.
ಈಗ ಪ್ರಕರಣದ ಮುಂದಿನ ವಿಚಾರಣೆ ಜುಲೈ 20 ರಂದು ನಡೆಯಲಿದೆ ಎಂದು ಹೇಳಿದೆ. ದೆಹಲಿ ಪೊಲೀಸರು ಜೂನ್ 15 ರಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದರು.
ಬ್ರಿಜ್ ಭೂಷಣ್ ಅವರಲ್ಲದೆ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೆಸರೂ ಸೇರಿಸಿ ಮಹಿಳಾ ಕುಸ್ತಿಪಟುಗಳು ಇಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.