ಮನೆ ಅಪರಾಧ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ವಿರುದ್ಧ ಫೋಕ್ಸೊ ಪ್ರಕರಣ ದಾಖಲು

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ವಿರುದ್ಧ ಫೋಕ್ಸೊ ಪ್ರಕರಣ ದಾಖಲು

0

ಮಡಿಕೇರಿ(Madikeri): ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲಾ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್ ನಾಯಕ್ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ಮನೋಹರ್ ನಾಯಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕ್ನನ್ನು ಅಮಾನತುಗೊಳಿಸಿದೆ.

ಹಿಂದಿನ ಲೇಖನಎರಡನೇ ಏಕದಿನ ಪಂದ್ಯ: 215 ರನ್ ಗಳಿಸಿ ಆಲೌಟ್ ಆದ ಶ್ರೀಲಂಕಾ
ಮುಂದಿನ ಲೇಖನನಗೆ ಹನಿ