ಮನೆ ಅಪರಾಧ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಗ್ರಾಮಸ್ಥರಿಂದ ಶಿಕ್ಷಕನಿಗೆ ಧರ್ಮದೇಟು

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಗ್ರಾಮಸ್ಥರಿಂದ ಶಿಕ್ಷಕನಿಗೆ ಧರ್ಮದೇಟು

0

ಮಧುಗಿರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ತಾಲ್ಲೂಕಿನ ದೊಡ್ಡೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ.

ಬಳಿಕೆ ಶಿಕ್ಷಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿಕ್ಷಕ ಮಂಜುನಾಥ್ ಪ್ರತಿನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು. ಸೋಮವಾರ ಶಾಲೆ ಆರಂಭಕ್ಕೆ ಮುನ್ನವೇ ಶಿಕ್ಷಕರನ್ನು ತಡೆದು ವಿಚಾರಿಸಿದ್ದಲ್ಲದೆ ಥಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ಬಡವನಹಳ್ಳಿ ಪೊಲೀಸ್ ಇನ್ಸ್‌ ಪೆಕ್ಟರ್ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದರು.

ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಶಿಕ್ಷಕ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.

ಹಿಂದಿನ ಲೇಖನಐಪಿಎಲ್-2023: ವೀಕ್ಷಕ ವಿವರಣೆಗಾರರ ಹೆಸರು ಅಂತಿಮ
ಮುಂದಿನ ಲೇಖನಹಾಸ್ಯ