ಮನೆ ಸ್ಥಳೀಯ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ

ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ

0

ಮೈಸೂರು: ಭಾರತ ವಿದ್ಯಾರ್ಥಿ ಫೆಡರೇಷನ್, ಮೈಸೂರು ವಿ ವಿ ಘಟಕದಿಂದ ಇಂದು ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫಡ್ ಭವನದ ಎದುರು ಪರೀಕ್ಷೆಗಳನ್ನು ಮುಂದೂಡುವಂತೆ, ಅಂಕ ಪಟ್ಟಿ ನೀಡುವಂತೆ ಮತ್ತು ಪರೀಕ್ಷಾ ಶುಲ್ಕ ಹೆಚ್ಚಳ  ಮಾಡಿರುವುದನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಪ್ರತಿಭಟನೆ ನಡೆಸಿದರು.

Join Our Whatsapp Group

ಪದವಿ ವಿದ್ಯಾರ್ಥಿಗಳಿಗೆ ಪಾಠಗಳು ಪೂರ್ಣ ಆಗದಿದ್ದರೂ ಮೈಸೂರು ವಿಶ್ವವಿದ್ಯಾನಿಲಯವು ಪರೀಕ್ಷೆಗಳನ್ನು ನಡೆಸುವ ಅಧಿಸೂಚನೆ ಹೊರಡಿಸಿದ್ದ ಕಾರಣ  ಪ್ರತಿಭಟನೆ ನಡೆಸಿ, ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೆ ಹಾಗೂ ಕುಲಸಚಿವರು ( ಪರೀಕ್ಷಾಂಗ) ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಎಸ್ ಎಫ್ ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್, ಮೈಸೂರು ವಿಶ್ವವಿದ್ಯಾನಿಲಯ ಅಧ್ಯಕ್ಷರಾದ ಚಿರಾಗ್ ಎಸ್. ಕೆ ಮೂರ್ತಿ, ಎಸ್ ಎಫ್ ಐ ರಾಜ್ಯ ಸಮಿತಿ ಸದಸ್ಯರಾದ ಅಭಿ ಡಿ, ಮತ್ತು ಜಿಲ್ಲಾ ಕಾರ್ಯದರ್ಶಿ ಪ್ರಜ್ವಲ್ ಟಿ ಮತ್ತು ಮುಖಂಡರಾದ ಭರತ, ಸೂರ್ಯ, ಪ್ರಕೃತಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.